ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ 3 ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು 1 ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:
ಎಂ.ಎಸ್ಸಿ ಜೊತೆಗೆ ಎನ್‌ಇಟಿ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವೇತನ:
ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 31,000/-ರೂ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,520/-ರೂ ವೇತನವನ್ನು ನೀಡಲಾಗುವುದು.
ಸಂದರ್ಶನದ ವಿವರ:
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 29 ಮತ್ತು ಡಿಸೆಂಬರ್ 30,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಕಚೇರಿ ವಿಳಾಸವನ್ನು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪಡೆಯಬಹುದು.


Click it and Unblock the Notifications











