UAS Dharwad Recruitment 2020: 8 ಅರೆಕಾಲಿಕ ಉಪನ್ಯಾಸಕ ಮತ್ತು ಫೆಸಿಲಿಟೇಟರ್ ಹುದ್ದೆಗಳಿಗೆ ನೇರ ಸಂದರ್ಶನ

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ 8 ಅರೆಕಾಲಿಕ ಉಪನ್ಯಾಸಕರು ಮತ್ತು ಫೆಸಿಲಿಟೇಟರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 7,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ....ಜ.7ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಎಂ.ಎ, ಬಿ.ಎಸ್ಸಿ, ಎಂ.ಎಡ್ ಜೊತೆಗೆ ಎನ್‌ಇಟಿ, ಸ್ಲೆಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಫೆಸಿಲಿಟೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/-ರೂ ಮತ್ತು ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 7,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಕಚೇರಿ ವಿಳಾಸವನ್ನು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪಡೆಯಬಹುದು.

For Quick Alerts
ALLOW NOTIFICATIONS  
For Daily Alerts

English summary
UAS Dharwad recruitment 2020 notification has been released for 8 part time teacher and facilitator posts. Interested candidates can attend walk in interview on January 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X