ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ 2 ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 15,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:
ಎಂ.ಟೆಕ್, ಎಂಬಿಎ, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ ಮತ್ತು ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು
ಮಾನ್ಯ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ಕೃಷಿ ವಿಶ್ವವಿದ್ಯಾಲಯ, ಧಾರವಾಡದ ನೇಮಕಾತಿ ನಿಯಮಾನುಸಾರ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವೇತನದ ವಿವರ:
ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,25,000/- ರಿಂದ 1,50,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಸಂದರ್ಶನದ ವಿವರ:
ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 15,2020ರಂದು ಬೆಳಿಗ್ಗೆ 1೦ ಗಂಟೆಗೆ ಡೀನ್ (ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡ ಇವರ ಕಛೇರಿಯಲ್ಲಿ ಖುದ್ದು ಸಂದರ್ಶನಕ್ಕೆ ಹಾಜರಾಗಬಹುದು, ಅರ್ಜಿಯನ್ನು ಮುಂಚಿತವಾಗಿ ಕಳುಹಿಸುವಂತಿಲ್ಲ.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











