ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಜೈವಿಕತಂತ್ರಜಾನ ವಿಭಾಗದಲ್ಲಿ ಟೆಕ್ನಿಶಿಯನ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಗಸ್ಟ್ 20,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:
ಬಯೋಇನ್ಪಾರ್ಮೆಟಿಕ್ಸ್ ನಲ್ಲಿ ಎಂ.ಎಸ್ಸಿ ಅಥವಾ ಬಿ.ಇ/ಕಂಪ್ಯೂಟರ್ ಸೈನ್ಸ್ ನಲ್ಲಿ ಎಂ.ಟೆಕ್ ಪದವಿಯನ್ನು ಮಾನ್ಯ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ಕೃಷಿ ವಿಶ್ವವಿದ್ಯಾಲಯ, ಧಾರವಾಡದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವೇತನದ ವಿವರ:
ಟೆಕ್ನಿಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.
ಸಂದರ್ಶನದ ವಿವರ:
ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 20,2020ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡ ಇವರ ಕಛೇರಿಯಲ್ಲಿ ಖುದ್ದು ಸಂದರ್ಶನಕ್ಕೆ ಹಾಜರಾಗಬಹುದು,
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











