ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಿದ್ಯಾರ್ಹತೆ:
ಎಂ.ಎಸ್ಸಿ ಜೊತೆಗೆ ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವೇತನ:
ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 38,000/- ರಿಂದ 40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಸಂದರ್ಶನದ ವಿವರ:
ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಜನವರಿ 28,2021ರಂದು ಬೆಳಿಗ್ಗೆ 11 ಗಂಟೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಕಚೇರಿ ವಿಳಾಸ:
ಡೀನ್ (ಕೃಷಿ),
ಕೃಷಿ ಮಹಾವಿದ್ಯಾಲಯ,
ಧಾರವಾಡ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.