
ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಜುಲೈ 5ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಿದ್ಯಾರ್ಹತೆ:
ಎಂ.ಹೆಚ್.ಎಸ್ಸಿ ಮತ್ತು ಡಾಕ್ಟರಲ್ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,000/- ರಿಂದ 35,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಸಂದರ್ಶನದ ವಿವರ:
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಜುಲೈ 5,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.