
ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ರಿಸರ್ಚ್ ಅಸೋಸಿಯೇಟ್ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಏಪ್ರಿಲ್ 23 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಬಿ.ಇ, ಎಂ.ಎಸ್ಸಿ/ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ವೇತನ:
ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 54,000/-ರೂ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.uasd.edu/ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಏಪ್ರಿಲ್ 23,2021ರಂದು ಬೆಳಿಗ್ಗೆ 11 ಗಂಟೆಗೆ ಸಹ ಸಂಶೋಧನಾ ನಿರ್ದೇಶಕರ ಕಚೇರಿ, ಕೃಷಿ ವಿಶ್ವ ವಿದ್ಯಾಲಯ, ಧಾರವಾಡದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











