ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ 4 ಸಹಾಯಕ ಪ್ರಾಧ್ಯಾಪಕ ಮತ್ತು 3 ಫೆಸಿಲಿಟೇಟರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಫೆಬ್ರವರಿ 18,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:
ಪದವಿ, ಸ್ನಾತಕೋತ್ತರ ಪದವಿ, ಡಾಕ್ಟರಲ್ ಪದವಿ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವೇತನ:
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,000/- ರಿಂದ 35,000/-ರೂ ಮತ್ತು ಫೆಸಿಲಿಟೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/-ರೂ ವೇತನವನ್ನು ನೀಡಲಾಗುವುದು.
ಸಂದರ್ಶನದ ವಿವರ:
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಫೆಬ್ರವರಿ 18,2021ರಂದು ಬೆಳಿಗ್ಗೆ 11 ಗಂಟೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸಂದರ್ಶನ ನಡೆಯುವ ಸ್ಥಳ:
ಡೀನ್ (ಅರಣ್ಯ),
ಅರಣ್ಯ ಮಹಾವಿದ್ಯಾಲಯ,
ಶಿಸರಿ,
ಉ.ಕ ಜಿಲ್ಲೆ -581401.
ಫೆಸಿಲಿಟೇಟರ್ ಹುದ್ದೆಗಳಿಗೆ ಸಂದರ್ಶನ ನಡೆಯುವ ಸ್ಥಳ:
ವಿಸ್ತರಣಾ ನಿರ್ದೇಶನಾಲಯ,
ಕೃಷಿ ವಿಶ್ವವಿದ್ಯಾಲಯ,
ಧಾರವಾಡ - 580005.
ಅಭ್ಯರ್ಥಿಗಳು ಫೆಸಿಲಿಟೇಟರ್ ಹುದ್ದೆಗಳ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











