UAS Dharwad Recruitment 2021: ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರ ಸಂದರ್ಶನ

ಕೃಷಿ ಮಹಾವಿದ್ಯಾಲಯ ಹನುಮನಮಟ್ಟಿಯಲ್ಲಿ 2020-21ನೇ ಸಾಲಿಗೆ ಸಹಾಯಕ ಪ್ರಾಧ್ಯಾಪಕ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮಾರ್ಚ್ 30,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ..ಮಾ.30ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ ಅಥವಾ ಡಾಕ್ಟರಲ್ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಮಾರ್ಚ್ 30,2021ರಂದು ಬೆಳಿಗ್ಗೆ 11:30ಕ್ಕೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸಂದರ್ಶನ ನಡೆಯುವ ಸ್ಥಳ:
ಕೃಷಿ (ಡೀನ್) ರವರ ಕಾರ್ಯಾಲಯ,
ಮಹಾವಿದ್ಯಾಲಯ ಹನುಮನಮಟ್ಟಿ.

ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


For Quick Alerts
ALLOW NOTIFICATIONS  
For Daily Alerts

English summary
UAS dharwad Recruitment 2021 notification released for assistant professor post. Interested candidates can attend walk in interview on March 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X