ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ. ಆಸಕ್ತರು ಅಗತ್ಯ ದಾಖಲೆಯೊಂದಿಗೆ ಜೂನ್ 29ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ವಿದ್ಯಾರ್ಹತೆ:
ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಯು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.
ವೇತನ:
ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 31,000/-ರೂ ವೇತನವನ್ನು ನೀಡಲಾಗುವುದು.
ಸಂದರ್ಶನದ ವಿವರ:
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 29,2021ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ:
ಡೀನ್ ಕಚೇರಿ,
ಕೃಷಿ ವಿಶ್ವವಿದ್ಯಾಲಯ,
ಧಾರವಾಡ,
ಕರ್ನಾಟಕ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











