ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ನರ್ಸರಿ ಶಾಲಾ ಶಿಕ್ಷಕಿ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆ.25,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ :
ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ನರ್ಸರಿ ಶಾಲಾ ಶಿಕ್ಷಕಿ ಹುದ್ದೆಗೆ ಬಿಹೆಚ್‌ಎಸ್ಸಿ/ಬಿಎಸ್ಸಿ ಮತ್ತು ಎಂಹೆಚ್‌ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.
ವಯೋಮಿತಿ :
ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ :
ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ನರ್ಸರಿ ಶಾಲಾ ಶಿಕ್ಷಕಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಬಿಹೆಚ್‌ಎಸ್ಸಿ/ಬಿಎಸ್ಸಿ ಅರ್ಹತೆ ಹೊಂದಿದವರಿಗೆ ತಿಂಗಳಿಗೆ 10,000/-ರೂ ಮತ್ತು ಎಂಹೆಚ್‌ಎಸ್ಸಿ ವಿದ್ಯಾರ್ಹತೆ ಹೊಂದಿದವರಿಗೆ ತಿಂಗಳಿಗೆ 14,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ನರ್ಸರಿ ಶಾಲಾ ಶಿಕ್ಷಕಿ ಹುದ್ದೆಗೆ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ :
ಕೃಷಿ ವಿಶ್ವವಿದ್ಯಾಲಯ, ಧಾರವಾಡ ನೇಮಕಾತಿಯ ನರ್ಸರಿ ಶಾಲಾ ಶಿಕ್ಷಕಿ ಹುದ್ದೆಗೆ ಸೇರಬಯಸುವ ಅಭ್ಯರ್ಥಿಯು ಅಧಿಕೃತ ವೆಬ್‌ಸೈಟ್ http://uasd.edu/ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಫೆಬ್ರವರಿ 25,2022 ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ:
ವಿದ್ಯಾಧಿಕಾರಿಗಳು,
ಸಮುದಾಯ ವಿಜ್ಞಾನ ಮಹಾವಿದ್ಯಾಲಯ,
ಕೃಷಿ ವಿಶ್ವವಿದ್ಯಾನಿಲಯ,
ಧಾರವಾಡ.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











