ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಅರೆಕಾಲಿಕ ಉಪನ್ಯಾಸಕ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜನವರಿ 10,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ :
ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಅರೆಕಾಲಿಕ ಉಪನ್ಯಾಸಕ ಹುದ್ದೆಗೆ ಎಂ.ಎಸ್ಸಿ, ಎಂವಿಎಸ್ಸಿ, ಪಿಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.
ವಯೋಮಿತಿ :
ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ :
ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಅರೆಕಾಲಿಕ ಉಪನ್ಯಾಸಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಅರೆಕಾಲಿಕ ಉಪನ್ಯಾಸಕ ಹುದ್ದೆಗೆ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ :
ಕೃಷಿ ವಿಶ್ವವಿದ್ಯಾಲಯ, ಧಾರವಾಡ ನೇಮಕಾತಿಯ ಅರೆಕಾಲಿಕ ಉಪನ್ಯಾಸಕ ಹುದ್ದೆಗೆ ಸೇರಬಯಸುವ ಅಭ್ಯರ್ಥಿಯು ಅಧಿಕೃತ ವೆಬ್‌ಸೈಟ್ http://uasd.edu/ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 10,2022 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ),
ಕೃಷಿ ಮಹಾವಿದ್ಯಾಲಯ,
ಧಾರವಾಡ.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











