ಕೃಷಿ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿ 36 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ 36 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆಯನ್ನು ಹೊಂದಿದ್ದಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 4,2019 ರೊಳಗೆ ಕಳುಹಿಸಬಹುದು.

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಸಿಸ್ಟೆಂಟ್ ಪ್ರೊಫೆಸರ್
Organisation ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ
Educational Qualification ಸ್ನಾತಕೋತ್ತರ ಪದವಿ ಮತ್ತು ಪಿಹೆಚ್‌ಡಿ
Job Location ರಾಯಚೂರು (ಕರ್ನಾಟಕ)
Salary Scale ತಿಂಗಳಿಗೆ 15,600/- ರಿಂದ 39,100/-ರೂ
Application Start Date March 6, 2019
Application End Date April 4, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಮತ್ತು ಪಿಹೆಚ್‌ಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಬ್ಯಾಕ್‌ಲಾಗ್ ಹುದ್ದೆಗಳು ( ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಧಾರವಾಡ ದಿಂದ ವರ್ಗಾಯಿಸಲಾಗಿದೆ)1
ಹೈದರಾಬಾದ್ ಕರ್ನಾಟಕ ಲೋಕಲ್ ಕೇಡರ್ ಬ್ಯಾಕ್‌ಲಾಗ್ ಹುದ್ದೆಗಳು29
ಹೈದರಾಬಾದ್-ಕರ್ನಾಟಕ ಲೋಕಲ್ ಕೇಡರ್ ಹುದ್ದೆಗಳು6
ಒಟ್ಟು36

ವಯೋಮಿತಿ:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಮತ್ತು ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು 5 ವರ್ಷ ಮತ್ತು2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 39,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 500/-ರೂ ಮತ್ತು ಇತರೆ ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 4,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:

ರಿಜಿಸ್ಟ್ರಾರ್,
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ,
ರಾಯಚೂರು- 584104

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
UAS Raichur Recruitment 2019:University of Agricultural Sciences Raichur (UAS Raichur) is going to recruit 36 candidates to fill their Assistant Professor in Raichur (Karnataka). Job Aspirants are requested to go through official website of UAS Raichur job notification 2019 before apply. Eligible candidates can apply through the application. Last Date to submit the application form is 04th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X