ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನಲ್ಲಿ 13 ಬೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆಯನ್ನು ಹೊಂದಿದ್ದಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ ನವೆಂಬರ್ 23,2019 ರೊಳಗೆ ಕಳುಹಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಬೋಧಕ |
| Organisation | ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ |
| Educational Qualification | ಪದವಿ , ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ, ಎಸ್‌ಎಸ್‌ಎಲ್‌ಸಿ, 7ನೇ ತರಗತಿ |
| Job Location | ರಾಯಚೂರು (ಕರ್ನಾಟಕ) |
| Salary Scale | ತಿಂಗಳಿಗೆ 57,700/- ರಿಂದ 1,82,400/-ರೂ |
| Application Start Date | October 17, 2019 |
| Application End Date | November 23, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಪದವಿ,ಸ್ನಾತಕೋತ್ತರ ಪದವಿ ಮತ್ತು ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಅರ್ಹರು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-Iರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಬೋಧಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 57,700/- ರಿಂದ 1,82,400/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಅರ್ಜಿ ಶುಲ್ಕ ಪಾವತಿಸಲು ನವೆಂಬರ್ 22,2019 ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ನವೆಂಬರ್ 23,2019 ರೊಳಗೆ ಕಳುಹಿಸಬಹುದು.
ಕಚೇರಿಯ ವಿಳಾಸ:
ರಿಜಿಸ್ಟ್ರಾರ್,
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ,
ರಾಯಚೂರು- 584104
ಅಭ್ಯರ್ಥಿಗಳು ರಾಯಚೂರು ಕೃಷಿ ವಿಶ್ವವಿದ್ಯಾಯಲದ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











