ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜನವರಿ 25,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ :
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಎಂ.ಎಸ್ಸಿ, ಪಿಹೆಚ್ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.
ವಯೋಮಿತಿ :
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ :
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/- ರಿಂದ 35,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ :
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಯು ಅಧಿಕೃತ ವೆಬ್ಸೈಟ್ http://uasraichur.edu.in/index.php/en/ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 25,2022 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ:
Pesticide Residue & Food Quality Analysis Laboratory,
University of Agricultural Sciences,
Raichur - 584104
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.