ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ಇಲ್ಲಿ 11 ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳಿಂದ ಜನವರಿ 23,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು,ಫೆಬ್ರವರಿ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಅಧಿಕಾರಿ |
| Organisation | ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ |
| Educational Qualification | ಪದವಿ,ಸ್ನಾತಕೋತ್ತರ ಪದವಿ,ಎಂ.ಫಿಲ್,ಪಿ.ಎಚ್‌ಡಿ |
| Job Location | ರಾಯಚೂರು (ಕರ್ನಾಟಕ) |
| Salary Scale | ತಿಂಗಳಿಗೆ 1,44,200/- ರಿಂದ 2,18,200/-ರೂ |
| Application Start Date | December 24, 2019 |
| Application End Date | February 15, 2020 |
ವಿದ್ಯಾರ್ಹತೆ:
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ,ರಾಯಚೂರುನೇಮಕಾತಿಯ ಅಧಿಕಾರಿ ಹುದ್ದೆಗಳಿಗೆ ಪದವಿ,ಸ್ನಾತಕೋತ್ತರ ಪದವಿ,ಎಂ.ಫಿಲ್ ಮತ್ತು ಪಿ.ಎಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ,ರಾಯಚೂರು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನದ ವಿವರ:
ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,44,200/- ರಿಂದ 2,18,200/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಪ್ರಾಯೋಗಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 3,000/-ರೂ ಅರ್ಜಿ ಶುಲ್ಕವನ್ನು ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 1,500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್/ಬ್ಯಾಂಕ್ ಚೆಕ್/ ಪೋಸ್ಟಲ್ ಆರ್ಡರ್ ಮೂಲಕ ಫೆಬ್ರವರಿ 15,2020ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ,ರಾಯಚೂರಿನ ಅಧಿಕೃತ ವೆಬ್‌ಸೈಟ್ http://www.uasraichur.edu.in/index.php/en/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಫೆಬ್ರವರಿ 15,2020ರೊಳಗೆ ರಿಜಿಸ್ಟರ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬಹುದು.
ಕಚೇರಿಯ ವಿಳಾಸ:
ರಿಜಿಸ್ಟ್ರಾರ್ ಕಛೇರಿ,
ಲಿಂಗಸುಗೂರ್ ರಸ್ತೆ,
ಕೃಷಿ ವಿಶ್ವವಿದ್ಯಾಲಯ,
ರಾಯಚೂರು-584104.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











