ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಯುಸಿಐಎಲ್) ನಲ್ಲಿ 130 ಮೈನಿಂಗ್ ಮೇಟ್, ಬ್ಲಾಸ್ಟರ್ ಮತ್ತು ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 4 ರಿಂದ ಜೂನ್ 3,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

UCIL ನೇಮಕಾತಿ 2022 ವಿದ್ಯಾರ್ಹತೆ :
ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮೈನಿಂಗ್ ಮೇಟ್, ಬ್ಲಾಸ್ಟರ್ ಮತ್ತು ಡ್ರೈವರ್ ಹುದ್ದೆಗಳಿಗೆ 10 ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.
UCIL ನೇಮಕಾತಿ 2022 ವಯೋಮಿತಿ :
ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮೈನಿಂಗ್ ಮೇಟ್, ಬ್ಲಾಸ್ಟರ್ ಮತ್ತು ಡ್ರೈವರ್ ಹುದ್ದೆಗಳಿಗೆ ಮಾರ್ಚ್ 31,2022ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

UCIL ನೇಮಕಾತಿ 2022 ವೇತನ :
ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮೈನಿಂಗ್ ಮೇಟ್, ಬ್ಲಾಸ್ಟರ್ ಮತ್ತು ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,119/- ರಿಂದ 9,153/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
UCIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮೈನಿಂಗ್ ಮೇಟ್, ಬ್ಲಾಸ್ಟರ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

UCIL ನೇಮಕಾತಿ 2022 ಅರ್ಜಿ ಶುಲ್ಕ :
ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮೈನಿಂಗ್ ಮೇಟ್, ಬ್ಲಾಸ್ಟರ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
UCIL ನೇಮಕಾತಿ 2022 ಅರ್ಜಿ ಸಲ್ಲಿಕೆ :
ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮೈನಿಂಗ್ ಮೇಟ್, ಬ್ಲಾಸ್ಟರ್ ಮತ್ತು ಡ್ರೈವರ್ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ucil.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 4 ರಿಂದ ಜೂನ್ 3,2022ರೊಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ವಿಳಾಸ:
General Manager (I/P&IRs/CP), Uranium Corporation of India Limited, PO: Jaduguda Mines, Dist: East Singhbhum, Jharkhand - 832102.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











