Udupi District Court Recruitment 2021 : 8 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ 8 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 30,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ 8 ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಉಡುಪಿ ಜಿಲ್ಲಾ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಮತ್ತು ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷದೊಳಗಿನ ಮತ್ತು ಪ.ಜಾ, ಪ.ಪಂಗಡದ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.

ವೇತನ:

ಉಡುಪಿ ಜಿಲ್ಲಾ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಉಡುಪಿ ಜಿಲ್ಲಾ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ಮತ್ತು ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ (ಆನ್‌ಲೈನ್ ಅಥವಾ ಎಸ್‌ಬಿಐ ಬ್ರಾಂಚ್) ಮೂಲಕ ಅಕ್ಟೋಬರ್ 4,2021ರೊಳಗೆ ಪಾವತಿಸಬಹುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯ ಅಧಿಕೃತ ವೆಬ್‌ಸೈಟ್ https://districts.ecourts.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 30,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಉಡುಪಿ ಜಿಲ್ಲಾ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Udupi District Court recruitment 2021 notification has been released for 8 stenographer posts. Apply before September 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X