ಉಡುಪಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 18 ಗ್ರಾಮಲೆಕ್ಕಿಗ ಹುದ್ದೆಗಳ ನೇಮಕಾತಿ

ಉಡುಪಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 18 ಗ್ರಾಮಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

18 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಗ್ರಾಮಲೆಕ್ಕಿಗ
Organisation ಜಿಲ್ಲಾ ಕಂದಾಯ ಇಲಾಖೆ
Educational Qualification 12ನೇ ತರಗತಿ / ದ್ವಿತೀಯ ಪಿಯುಸಿ
Job Location ಉಡುಪಿ ಜಿಲ್ಲೆ (ಕರ್ನಾಟಕ)
Salary Scale ತಿಂಗಳಿಗೆ 21,400/- ರಿಂದ 42,000/-ರೂ ವೇತನ
Application Start Date December 2, 2019
Application End Date December 31, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು.

ವಯೋಮಿತಿ:

ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್‌.ಇ ಅಥವಾ ಐ.ಸಿ.ಎಸ್‌.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ
ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಅಧಿಸೂಚನೆಯನ್ನು ಓದತಕ್ಕದ್ದು.

ಅರ್ಜಿ ಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಉಡುಪಿ ಜಿಲ್ಲೆಯ ಅಧಿಕೃತ ವೆಬ್‌ಸೈಟ್‌ https://udupi.nic.in/en/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

18 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
Udupi District revenue department recruitment 2019 notification has been released on official website for the recruitment of 18 village accountant posts. Interested candidates can apply through online before 31st December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+