Kalaburagi Udyoga Mela 2022 :ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಅವರಿಂದ ಶುಭ ಹಾರೈಕೆಗಳು.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಫೆಬ್ರವರಿ 12ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯ ವರೆಗೆ ಕಲಬುರಗಿ ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಬಿ.ಇ, ಬಿ.ಕಾಂ, ಬಿ.ಎಸ್ಸಿ, ಬಿ.ಎ, ಬಿಸಿಎ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು.
ಪ್ರಮುಖ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು, 5 ಸಾವಿರಕ್ಕೂ ಅಧಿಕ ಉದ್ಯೋಗಗಳ ನೇಮಕಾತಿಯನ್ನು ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, 2 ಫೋಟೋ, ಆಧಾರ್ ಕಾರ್ಡ್ ಹಾಗೂ ಐದು ಸೆಟ್ ಸ್ವವಿವರದ ಅರ್ಜಿಗಳನ್ನು ತೆಗೆದುಕೊಂಡು ಹೋಗಬೇಕಿರುತ್ತದೆ ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಹತೆಗಳು, ವಯೋಮಿತಿ, ವೇತನ ಮತ್ತು ಉದ್ಯೋಗದ ಸಂಪೂರ್ಣ ವಿವರಗಳನ್ನು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಪಡೆದುಕೊಳ್ಳಬಹುದು.
ದೂರವಾಣಿ ಸಂಖ್ಯೆ : 8277895931
ಉದ್ಯೋಗ ಮೇಳ ನಡೆಯುವ ಸ್ಥಳ :
ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ,
ಐವನ್ನ-ಎ-ಶಾಹಿ, ಶಂಭೋಜಿನಲ್ಲಿ, ಕಲಬುರ್ಗಿ-585102
ಆಸಕ್ತರು ಮತ್ತು ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು https://skillconnect.kaushalkar.com/app/gulbarga-jobfair ಲಿಂಕ್ ಬಳಸಿ ತಮ್ಮ ಹೆಸರನ್ನು ಈ ಕೂಡಲೇ ನೊಂದಾಯಿಸಿಕೊಳ್ಳಿ. ಅಭ್ಯರ್ಥಿಗಳು ತಮ್ಮ ರೆಸ್ಯುಮೆಯನ್ನು [email protected] ವಿಳಾಸಕ್ಕೆ ಮೇಲ್ ಕೂಡ ಮಾಡಬಹುದು.


Click it and Unblock the Notifications