UIDAI Recruitment 2021: ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಯುನಿಕ್ಯು ಐಡೆಂಟಿಫಿಕೆಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) 4 ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ (ಟೆಕ್ನಾಲಜಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಯುಐಡಿಎಐ ನಲ್ಲಿ ಉದ್ಯೋಗಾವಕಾಶ...ಏ.12ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ (ಟೆಕ್ನಾಲಜಿ) ಹುದ್ದೆಗಳಿಗೆ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,23,100/- ರಿಂದ 2,15,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ (ಟೆಕ್ನಾಲಜಿ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://uidai.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಏಪ್ರಿಲ್ 12,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ADG (HR),
Unique Identification authority of india (UIDAI),
4th floor,
bangla sahib road,
behind kali mandir, gole market,
New delhi-110001.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚೆನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
UIDAI recruitment 2021 notification has been released for 4 assistant director general (technology) posts. Interested candidates can apply before April 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X