Union Bank Of India Recruitment 2021 : 347 ಮ್ಯಾನೇಜರ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (ಯುಬಿಐ) ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 347 ಹುದ್ದೆಗಳ ನೇಮಕಾತಿ

ಆಸಕ್ತ ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅಧಿಕೃತ ವೆಬ್‌ಸೈಟ್ Unionbankofindia.co.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಸೆಪ್ಟೆಂಬರ್ 3,2021ರೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಯುಬಿಐ ನೇಮಕಾತಿ 2021: ಖಾಲಿ ಹುದ್ದೆಗಳ ವಿವರಗಳು

ಯುಬಿಐ ನೇಮಕಾತಿ 2021: ಖಾಲಿ ಹುದ್ದೆಗಳ ವಿವರಗಳು

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (ಯುಬಿಐ) 2021ರ ಸಾಲಿಗೆ 347 ಹಿರಿಯ ವ್ಯವಸ್ಥಾಪಕರು, ವ್ಯವಸ್ಥಾಪಕರು ಮತ್ತು ಸಹಾಯಕ ವ್ಯವಸ್ಥಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಹುದ್ದೆಗಳ ವಿವರ ಇಲ್ಲಿದೆ.

ಹಿರಿಯ ಮ್ಯಾನೇಜರ್ (ರಿಸ್ಕ್) 60 ಹುದ್ದೆಗಳು
ಮ್ಯಾನೇಜರ್ (ರಿಸ್ಕ್) 60 ಹುದ್ದೆಗಳು
ಮ್ಯಾನೇಜರ್ (ಸಿವಿಲ್ ಇಂಜಿನಿಯರ್) 07 ಹುದ್ದೆಗಳು
ಮ್ಯಾನೇಜರ್ (ಆರ್ಕಿಟೆಕ್ಟ್) 07 ಹುದ್ದೆಗಳು
ಮ್ಯಾನೇಜರ್ (ಎಲೆಕ್ಟ್ರಿಕಲ್ ಇಂಜಿನಿಯರ್) 02 ಹುದ್ದೆಗಳು
ಮ್ಯಾನೇಜರ್ (ಪ್ರಿಂಟಿಂಗ್ ಟೆಕ್ನಾಲಜಿಸ್ಟ್) 01 ಹುದ್ದೆ
ಮ್ಯಾನೇಜರ್ (ವಿದೇಶೀ ವಿನಿಮಯ) 50 ಹುದ್ದೆಗಳು
ಮ್ಯಾನೇಜರ್ (ಚಾರ್ಟರ್ಡ್ ಅಕೌಂಟೆಂಟ್) 14 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್ (ತಾಂತ್ರಿಕ ಅಧಿಕಾರಿ) 26 ಹುದ್ದೆಗಳು
ಸಹಾಯಕ ವ್ಯವಸ್ಥಾಪಕರು (ವಿದೇಶೀ ವಿನಿಮಯ) 120 ಹುದ್ದೆಗಳು
ಒಟ್ಟು 347 ಹುದ್ದೆಗಳು

ಯುಬಿಐ ನೇಮಕಾತಿ 2021: ಅರ್ಹತಾ ಮಾನದಂಡ

ಯುಬಿಐ ನೇಮಕಾತಿ 2021: ಅರ್ಹತಾ ಮಾನದಂಡ

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಹಣಕಾಸಿನ ಅಪಾಯ ನಿರ್ವಹಣೆ/ಸಿಎ/ಸಿಎಂಎ/ಸಿಎಸ್ ಅಥವಾ ಗಣಿತ/ಅಂಕಿಅಂಶ/ಅರ್ಥಶಾಸ್ತ್ರ ಅಥವಾ ಬಿಇ/ಬಿಟೆಕ್‌ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು ಅಥವಾ ಮಾನ್ಯತೆ ಪಡೆದ ಸಂಸ್ಥೆಯಿಂದ ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ಪೋಸ್ಟ್ -ವಾರು ವಿವರಗಳಿಗಾಗಿ ಅಧಿಕೃತ ಅಧಿಸೂಚನೆ ಪಿಡಿಎಫ್ ಅನ್ನು ಪರಿಶೀಲಿಸಬಹುದು.

ವಯಸ್ಸಿನ ಮಿತಿ: ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಕನಿಷ್ಟ 20 ರಿಂದ ಗರಿಷ್ಟ 30 ವರ್ಷಗಳು, ವ್ಯವಸ್ಥಾಪಕ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 35 ವರ್ಷಗಳು ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಕನಿಷ್ಟ 30 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಯುಬಿಐ ನೇಮಕಾತಿ 2021: ಆಯ್ಕೆ ಮಾನದಂಡ ಮತ್ತು ವೇತನ ಶ್ರೇಣಿ :

ಯುಬಿಐ ನೇಮಕಾತಿ 2021: ಆಯ್ಕೆ ಮಾನದಂಡ ಮತ್ತು ವೇತನ ಶ್ರೇಣಿ :

ಯುಬಿಐ ನೇಮಕಾತಿ 2021ರ ಮ್ಯಾನೇಜರ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ವೈಯಕ್ತಿಕ ಸಂದರ್ಶನ ಅಥವಾ ಗುಂಪು ಚರ್ಚೆಯ ಆಧಾರದ ಮೇಲೆ ಆಯ್ಕೆ ಮಾಡಬಹುದು.

ಯುಬಿಐ ನೇಮಕಾತಿಗೆ ಸಂಬಂಧಿಸಿದಂತೆ ಮೇಲೆ ತಿಳಿಸಿದ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅಭ್ಯರ್ಥಿಯ ವಿದ್ಯಾರ್ಹತೆ, ಅನುಭವ ಮತ್ತು ಆಯಾ ಹುದ್ದೆಗಳಿಗೆ ಒಟ್ಟಾರೆ ಸೂಕ್ತತೆಯ ಆಧಾರದ ಮೇಲೆ ವೇತನವನ್ನು ನೀಡಲಾಗುತ್ತದೆ.

ಯುಬಿಐ ನೇಮಕಾತಿ 2021: ಅರ್ಜಿ ಸಲ್ಲಿಸುವುದು ಹೇಗೆ ?:

ಯುಬಿಐ ನೇಮಕಾತಿ 2021: ಅರ್ಜಿ ಸಲ್ಲಿಸುವುದು ಹೇಗೆ ?:

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 2021ರ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಹುದ್ದೆಗಳಿಗೆ ಸೇರಬಯಸುವ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ Unionbankofindia.co.in ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಅಗತ್ಯವಿರುವ ಎಲ್ಲಾ ವಿವರಗಳನ್ನು ಸಂಬಂಧಿತ ದಾಖಲೆಗಳೊಂದಿಗೆ ಭರ್ತಿ ಮಾಡಿ ಮತ್ತು ಅರ್ಜಿ ನಮೂನೆಯನ್ನು ಸೆಪ್ಟೆಂಬರ್ 3,2021ರೊಳಗೆ ಸಲ್ಲಿಸಬೇಕು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2021ರ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Union bank of india recruitment 2021 notification has been released for 347 manager and other posts. Interested candidates can apply before september 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+