ಯೂನಿಯನ್ ಬ್ಯಾಂಕ್ ನೇಮಕಾತಿ 100 ಆರ್ಮ್ಡ್ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಫೆಬ್ರವರಿ 18,2019 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ಆರ್ಮ್ಡ್ ಗಾರ್ಡ್ |
| Organisation | ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ |
| Educational Qualification | 10ನೇ ತರಗತಿ ಅಥವಾ ಅದಕ್ಕೆ ಸಮಾನ ಅರ್ಹತೆ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 9,560/-ರಿಂದ 18,545/-ರೂ ವೇತನ |
| Application Start Date | January 23, 2019 |
| Application End Date | February 18, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ 10ನೇ ತರಗತಿ ಅಥವಾ ಅದಕ್ಕೆ ಸಮಾನ ಅರ್ಹತೆ ಹೊಂದಿರಬೇಕು ಮತ್ತು 10+2 ಅಥವಾ ಅದಕ್ಕೆ ಸಮಾನ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಂತಿಲ್ಲ.
ವಯೋಮಿತಿ:
ಈ ಹುದ್ದೆಗಳಿಗೆ ಜನವರಿ 1,2019ಕ್ಕೆ ಅನ್ವಯವಾಗುವಂತೆ ಕನಿಷ್ಟ 18 ರಿಂದ ಗರಿಷ್ಟ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,560/-ರಿಂದ 18,545/-ರೂ ವೇತನವನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
ಅರ್ಜಿದಾರರು ಅರ್ಜಿಯ ಜೊತೆಗೆ 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರನ್ನು ಆನ್ ಲೈನ್ ಪರೀಕ್ಷೆ ಮತ್ತು ಫಿಸಿಕಲ್ ಫಿಟ್ನೆಸ್ ಪರೀಕ್ಷೆಯ ಮೂಲಕ ಆಯ್ಕೆಮಾಡಲಾಗುವುದು.ಆನ್ ಲೈನ್ ಪರೀಕ್ಷೆಯು ಮಾರ್ಚ್ 17,2019 ರಂದು ನಡೆಸಲಾಗುವುದು.
ಈ ಹುದ್ದೆಗಳ ಬಗೆಗಿನ ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











