ಯುನೈಟೆಡ್ ಇಂಡಿಯಾದಲ್ಲಿ 696 ಹುದ್ದೆಗಳ ನೇಮಕಾತಿ

ದೇಶಾದ್ಯಂತ ಒಟ್ಟು 696 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಕರ್ನಾಟಕದಲ್ಲಿ 61 ಹುದ್ದೆಗಳು ಖಾಲಿ ಇವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ ೨೮ ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಭಾರತ ಸರ್ಕಾರದ ಸಂಪೂರ್ಣ ಅಧೀನದಲ್ಲಿರುವ ಸಾರ್ವಜನಿಕ ಸ್ವಾಮ್ಯದ ಪ್ರಮುಖ ವಿಮಾ ಕಂಪನಿ 'ಯುನೈಟೆಡ್ ಇಂಡಿಯಾ' ಇನ್ಶೂರೆನ್ಸ್ ಕಂಪನಿ ಲಿಮಿಟಡ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಆನ್-ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದೇಶಾದ್ಯಂತ ಒಟ್ಟು 696 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಕರ್ನಾಟಕದಲ್ಲಿ 61 ಹುದ್ದೆಗಳು ಖಾಲಿ ಇವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ ೨೮ ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಯುನೈಟೆಡ್ ಇಂಡಿಯಾದಲ್ಲಿ ನೇಮಕಾತಿ

ಹುದ್ದೆಗಳ ವಿವರ

ಹುದ್ದೆಯ ಹೆಸರು: ಅಸಿಸ್ಟೆಂಟ್
ಒಟ್ಟು ಹುದ್ದೆಗಳು 696
ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳು: 61 (ಸಾಮಾನ್ಯ-35, ಎಸ್.ಸಿ-9, ಎಸ್.ಟಿ-5, ಒಬಿಸಿ-12)

ವೇತನ ಶ್ರೇಣಿ: ರೂ.14435-840(1)-15275-915(2)-17105-1030(5)-22255-1195(2)-24645-1455(3)-29010-1510(2)-32030-1610(5)/-

ವಿದ್ಯಾರ್ಹತೆ

ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ರಾಜ್ಯದ ಪ್ರಾದೇಶಿಕ ಭಾಷೆಯನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು. ಕರ್ನಾಟಕಕ್ಕೆ ಮೀಸಲಿರಿಸಿದ ಹುದ್ದೆಗಳಿಗೆ ಕನ್ನಡ ಬಲ್ಲವರು ಮಾತ್ರ ಅರ್ಜಿ ಸಲ್ಲಿಸಬಹುದು.

ಇದನ್ನು ಗಮನಿಸಿ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 45 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ

ವಯೋಮಿತಿ

  • ಕನಿಷ್ಠ 18 ವರ್ಷ ಮತ್ತು ಗರಿಷ್ಠ 28 ವರ್ಷ
  • ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 2 ಹಂತದ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಪ್ರಿಲಿಮ್ಸ್ 100 ಅಂಕಗಳಿಗೆ ಮತ್ತು ಮೇನ್ಸ್ ಪರೀಕ್ಷೆಯು 250 ಅಂಕಗಳಿಗೆ ನಡೆಯಲಿದೆ.

ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳಿಗೆ ಭಾಷಾ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಕರ್ನಾಟಕದ ಪರೀಕ್ಷಾ ಕೇಂದ್ರಗಳು

ಬೆಂಗಳೂರು, ಬೀದರ್, ಧಾರವಾಡ, ಹಾಸನ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ

ಪರೀಕ್ಷಾ ಕರೆಪತ್ರ

ಅಭ್ಯರ್ಥಿಗಳು ಪರೀಕ್ಷಾ ಕರೆ ಪತ್ರವನ್ನು ಪರೀಕ್ಷೆ ನಡೆಯಲಿರುವ ಹತ್ತು ದಿನದ ಮುಂಚಿತವಾಗಿ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳತಕ್ಕದ್ದು.

ಪರೀಕ್ಷೆಯ ಸಮಯ ಮತ್ತು ಅಭ್ಯರ್ಥಿಗಳು ಹಾಜರಾಗಬೇಕಾದ ಸ್ಥಳವನ್ನು ಪರೀಕ್ಷಾ ಕರೆ ಪತ್ರದಲ್ಲಿ ನಮೂದಿಸಲಾಗಿರುತ್ತದೆ.

ಅರ್ಜಿ ಶುಲ್ಕ

  • ಎಸ್.ಸಿ/ಎಸ್.ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/-

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-08-2017

ಹೆಚ್ಚಿನ ಮಾಹಿತಿಗಾಗಿ uiic.co.in ಗಮನಿಸಿ

More News  

For Quick Alerts
ALLOW NOTIFICATIONS  
For Daily Alerts

English summary
United India insurance Company proposes to recruit young and dynamic candidates for its Offices all over India. Applications are invitedfrom eligible Indian citizens for the post of ASSISTANT.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+