ಮೈಸೂರು ವಿವಿಯಲ್ಲಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿ

ಮೈಸೂರು ವಿಶ್ವವಿದ್ಯಾನಿಲಯವು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.ಅರ್ಹ ಅಭ್ಯರ್ಥಿಗಳು ಡಿಸೆಂಬರ್ 3,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ನೋಡಿ.

ಮೈಸೂರು ವಿವಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಜ್ಯೂನಿಯರ್ ರಿಸರ್ಚ್ ಫೆಲೋ
Organisation ಮೈಸೂರು ವಿಶ್ವವಿದ್ಯಾನಿಲಯ
Educational Qualification ಎಂ.ಎ/ಎಂಎಸ್‌ಡಬ್ಲ್ಯೂ/ಎಂ.ಎಡ್
Job Location ಮೈಸೂರು (ಕರ್ನಾಟಕ)
Salary Scale ತಿಂಗಳಿಗೆ 25,000/-ರೂ
Application Start Date November 21, 2019
Application End Date December 3, 2019

ಶೈಕ್ಷಣಿಕ ವಿದ್ಯಾರ್ಹತೆ:

ಎಂ.ಎ/ಎಂಎಸ್‌ಡಬ್ಲ್ಯೂ/ಎಂ.ಎಡ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ http://www.uni-mysore.ac.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿ. ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ
ಅರ್ಜಿಯನ್ನು ಡಿಸೆಂಬರ್ 3,2019 ರೊಳಗೆ ಅಂಚೆ ಅಥವಾ ಕೊರಿಯರ್ ಮೂಲಕ ಸಲ್ಲಿಸಬಹುದು.

ಕಚೇರಿಯ ವಿಳಾಸ:
ಡಾ. ಡಿ.ಸಿ ನಂಜುಂಡ,
ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ನೀತಿ ಅಧ್ಯಯನ ಕೇಂದ್ರ,
ಮಾನವಿಕ ವಿಭಾಗ,
ಮಾನಸಗಂಗೋತ್ರಿ,
ಮೈಸೂರು-570006.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಒದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
University of Mysore recruitment 2019 notification has been released on official website for the recruitment of junior research fellow posts. Interested candidates can apply before 3rd December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+