ಮೈಸೂರು ವಿಶ್ವವಿದ್ಯಾನಿಲಯ ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

| CRITERIA | DETAILS |
| Name Of The Posts | ಸಂಶೋಧನಾ ಸಹಾಯಕ |
| Organisation | ಮೈಸೂರು ವಿಶ್ವವಿದ್ಯಾನಿಲಯ |
| Educational Qualification | ಸ್ನಾತಕೋತ್ತರ ಪದವಿ |
| Job Location | ಮೈಸೂರು (ಕರ್ನಾಟಕ) |
| Salary Scale | ತಿಂಗಳಿಗೆ 8,000/-ರೂ |
| Application Start Date | October 18, 2019 |
| Application End Date | October 31, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಸಂಶೋಧನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ http://www.uni-mysore.ac.in/ ಗೆ ಹೋಗಿ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಅಕ್ಟೋಬರ್ 31,2019 ರೊಳಗೆ ಅಂಚೆ ಅಥವಾ ನೇರವಾಗಿ ಸಲ್ಲಿಸಬಹುದು.
ಕಚೇರಿಯ ವಿಳಾಸ:
ಅಧ್ಯಕ್ಷರು,
ರಾಜ್ಯಶಾಸ್ತ್ರ ಅಧ್ಯಯನ ವಿಭಾಗ,
ಮೈಸೂರು ವಿಶ್ವವಿದ್ಯಾನಿಲಯ,
ಮಾನಸಗಂಗೋತ್ರಿ,
ಮೈಸೂರು-570006
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಒದಲು ಮುಂದೆ ನೋಡಿ


Click it and Unblock the Notifications











