ಮೈಸೂರು ವಿಶ್ವವಿದ್ಯಾಲಯ ಜ್ಯೂನಿಯರ್ ರಿಸರ್ಚ್ ಫೆಲೋ/ಸೀನಿಯರ್ ರಿಸರ್ಚ್ ಫೆಲೋ/ರಿಸರ್ಚ್ ಅಸೋಸಿಯೇಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ:
ಎಂ.ಎಸ್ಸಿ ಮತ್ತು ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಗರಿಷ್ಟ 28 ವರ್ಷ, ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಗರಿಷ್ಟ 32 ವರ್ಷ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಸ್ಟೈಫೆಂಡ್:
ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 31,000/-ರೂ, ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 35,000/-ರೂ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 47,000/-ರೂ ಸ್ಟೈಫೆಂಡ್ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗೆ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆ ಹೊರಡಿಸಿದ 20 ದಿನದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.