
ಮೈಸೂರು ವಿಶ್ವವಿದ್ಯಾಲಯವು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಈ ಹುದ್ದೆಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ/ಓಬಿಸಿ/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಪ್ರಕಟಣೆ ಹೊರಡಿಸಿದ ಎರಡು ವಾರದೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಮೈಸೂರು ವಿವಿಯ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











