UPSC NDA And NA (I) 2022 Notification : 341 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ ಕಂಬೈನ್ಡ್ ಡೆಫೆನ್ಸ್ ಸರ್ವೀಸ್ (I) ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟ ಮಾಡಿದೆ. ಆಯೋಗವು 341 ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆಯನ್ನು ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಯುಪಿಎಸ್‌ಸಿ ಕಂಬೈನ್ಡ್ ಡೆಫೆನ್ಸ್ ಸರ್ವೀಸ್ (I) ಪರೀಕ್ಷೆಯ ಅಧಿಸೂಚನೆ ಪ್ರಕಟ

ಅಧಿಸೂಚನೆ ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಜನವರಿ 11,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ ಏನಿರಬೇಕು ? :

ವಿದ್ಯಾರ್ಹತೆ ಏನಿರಬೇಕು ? :

ಯುಪಿಎಸ್ಸಿ ನೇಮಕಾತಿಯ ಕಂಬೈನ್ಡ್ ಡೆಫೆನ್ಸ್ ಸರ್ವೀಸ್ (I) ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಎಷ್ಟಿರಬೇಕು ? :

ವಯೋಮಿತಿ ಎಷ್ಟಿರಬೇಕು ? :

ಯುಪಿಎಸ್ಸಿ ಕಂಬೈನ್ಡ್ ಡೆಫೆನ್ಸ್ ಸರ್ವೀಸ್ (I) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಯೋಮಿತಿ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆ :

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಕಂಬೈನ್ಡ್ ಡೆಫೆನ್ಸ್ ಸರ್ವೀಸ್ (I) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಅರ್ಜಿ ಶುಲ್ಕವನ್ನು ನಗದು ರೂಪದಲ್ಲಿ ಪಾವತಿಸಲು ಜನವರಿ 10,2022 ಕೊನೆಯ ದಿನವಾಗಿರುತ್ತದೆ. ಆನ್‌ಲೈನ್ ಮೂಲಕ ಪಾವತಿಸಲು ಜನವರಿ 11,2022ರ ಸಂಜೆ 6 ಗಂಟೆ ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಕೆ :

ಅರ್ಜಿ ಸಲ್ಲಿಕೆ :

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 11,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು :

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಡಿಸೆಂಬರ್ 22,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 11,2022ರ ಸಂಜೆ 6 ಗಂಟೆ
ಆನ್‌ಲೈನ್ ಅರ್ಜಿ ವಿತ್‌ಡ್ರಾ ಮಾಡಲು ದಿನಾಂಕ : ಜನವರಿ 18,2022 ರಿಂದ ಜನವರಿ 24,2022ರ ಸಂಜೆ 6 ಗಂಟೆ

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC CDS (I) 2022 exam notification has been released on official website for 341 CDS (I) posts. Interested candidates can apply before January 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+