ಯುಪಿಎಸ್ಸಿ ವಿವಿಧ ಹುದ್ದೆಗಳ ನೇಮಕಾತಿ

Posted By:

ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) ಜೂನಿಯರ್ ಸೈಂಟಿಫಿಕ್ ಆಫೀಸರ್ ಮತ್ತು ಅಸಿಸ್ಟೆಂಟ್ ಅಡ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ವಿವಿಧ ವಿಭಾಗಗಳಲ್ಲಿ 5 ಜೂನಿಯರ್ ಸೈಂಟಿಫಿಕ್ ಆಫೀಸರ್ ಹುದ್ದೆ ಮತ್ತು 2 ಅಸಿಸ್ಟೆಂಟ್ ಅಡ್ವೈಸರ್ ಹುದ್ದೆಗಳು ಸೇರಿದಂತೆ ಒಟ್ಟು 7 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಯುಪಿಎಸ್ಸಿ ನೇಮಕಾತಿ

ವಿದ್ಯಾರ್ಹತೆ

ಜೂನಿಯರ್ ಸೈಂಟಿಫಿಕ್ ಹುದ್ದೆಗೆ ಮೈಕ್ರೊಬಯಾಲಜಿಯಲ್ಲಿ ಎಂ.ಎಸ್ಸಿ ಓದಿರುವವರು ಅರ್ಜಿ ಸಲ್ಲಿಸಬಹುದು ಅಥವಾ ಬಾಟನಿಯಲ್ಲಿ ಪ್ಲ್ಯಾಂಟ್ ಪೆಥಾಲಜಿ ಅಥವಾ ಮೈಕ್ರೊಬಯೋಲಜಿ ಅಥವಾ ಮೈಕೊಲಜಿ ಸ್ಪೆಷಲೈಸೇಷನ್ ಜೊತೆ ಎಂಎಸ್ಸಿ ಓದಿರುವವರು ಅರ್ಜಿ ಸಲ್ಲಿಸಬಹುದು. ಅಥವಾ ಸಾಯಿಲ್ ಸೈನ್ಸ್ ಅಥವಾ ಅಗ್ರಿಕಲ್ಚರ್ ಕೆಮಿಸ್ಟ್ರಿ ಅಥವಾ ಅಗ್ರೊನೊಮಿ ಅಥವಾ ಮೈಕ್ರೊಬಯಾಲಜಿ ಅಥವಾ ಪ್ಲ್ಯಾಂಟ್ ಪೆಥಾಲಜಿ ಅಥವಾ ಹಾರ್ಟಿಕಲ್ಚರ್ ಅಥವಾ ಕೃಷಿಯಲ್ಲಿ ಎಂ.ಎಸ್ಸಿ ಓದಿರುವವರು ಅರ್ಜಿ ಸಲ್ಲಿಸಬಹುದು.

ಅಸಿಸ್ಟೆಂಟ್ ಅಡ್ವೈಸರ್ ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್ ಅಥವಾ ಎನ್ವೈರ್ನಮೆಂಟಲ್ ಇಂಜಿನಿಯರಿಂಗ್ ಅಥವಾ ಪಬ್ಲಿಕ್ ಹೆಲ್ತ್ ಎಂಜಿನಿಯರಿಂಗ್ ನಲ್ಲಿ ಪದವಿ ಓದಿರುವವರು ಅಥವಾ ಪಬ್ಲಿಕ್ ಹೆಲ್ತ್ ಎಂಜಿನಿಯರಿಂಗ್ ಅಥವಾ ಎನ್ವೈರ್ನಮೆಂಟಲ್ ಎಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅವಕಾಶವಿದೆ.

ವಯೋಮಿತಿ

ಜೂ.ಸೈಂಟಿಫಿಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 30 ವರ್ಷ ಮತ್ತು ಅಸಿಸ್ಟೆಂಟ್ ಅಡ್ವೈಸರ್ ಹುದ್ದೆಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಐದು ವರ್ಷ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.25/-

ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸಬೇಕಿಲ್ಲ

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-09-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನು ಗಮನಿಸಿ: ಬೆಂಗಳೂರಿನ ಅಂಚೆ ಇಲಾಖೆಯಲ್ಲಿ ನೇಮಕಾತಿ

English summary
upsc recruiting junior scientific officer and assistant officers. Eligible candidates should apply through online on before september 28.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia