ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) 2018-2019ನೇ ಸಾಲಿನ ನೇಮಕಾತಿಗೆ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸದರಿ ಸ್ಟೆಷಲಿಸ್ಟ್ ಗ್ರೇಡ್ 3, ಪಶುವೈದ್ಯ ಸಹಾಯಕ ಸೇರಿದಂತೆ 13ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು ಜನವರಿ 11,2019ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿ.

| CRITERIA | DETAILS |
| Name Of The Posts | ಸ್ಪೆಷಲಿಸ್ಟ್ , ಪಶುವೈದ್ಯ ಸಹಾಯಕ |
| Organisation | ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಶನ್ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 15,600/- ರಿಂದ 39,100/- ರೂ |
| Application End Date | January 11, 2019 |
- Total Number of Posts: 13
ಶೈಕ್ಷಣಿಕ ಆರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಸ್ಪೆಷಲಿಸ್ಟ್: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂಬಿಬಿಎಸ್ ಪದವಿ ಪಡೆದಿರಬೇಕು.
ಪಶುವೈದ್ಯ ಸಹಾಯಕ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪ್ರಾಣಿ ಹಾಗೂ ಪಶುವೈದ್ಯ ವಿಜ್ಞಾನ ವಿಷಯದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸಲಿರುವ ಆಸಕ್ತ ಅಭ್ಯರ್ಥಿಗಳು ಸ್ಟೆಷಲಿಸ್ಟ್ ಹುದ್ದೆಗೆ 40 ವರ್ಷ ವಯಸ್ಸಿನೊಳಗಿರಬೇಕು ಮತ್ತು ಪಶುವೈದ್ಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 38 ವರ್ಷ ವಯಸ್ಸಿನ ಒಳಗಿರಬೇಕು.
ವೇತನದ ವಿವರ:
ಸ್ಟೆಷಲಿಸ್ಟ್ ಮತ್ತು ಪಶುವೈದ್ಯ ಸಹಾಯಕ ಹುದ್ದೆಗಳಿಗೆ ತಿಂಗಳಿಗೆ 15,600/- ರಿಂದ 39,100/- ರೂ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಆನ್ ಲೈನ್ ಮೂಲಕ ಜನವರಿ 10,2019 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕದ ವಿವರ:
ಈ ಹುದ್ದೆಗಳಿಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸುವುದರ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಎಸ್ ಸ್ಸಿ/ಎಸ್ ಟಿ/ಪಿ ಹೆಚ್/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ. ಇತರೆ ಅಭ್ಯರ್ಥಿಗಳು ರೂ 25/- ಅನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯನ್ನು ಇಲ್ಲಿ ಕ್ಲಿಕ್ ಮಾಡಿ
ಅಥವಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











