ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ( UPSC) 986 ಐಎಎಸ್ & ಐಎಫ್‌ಎಸ್ ಸಿವಿಲ್ ಸರ್ವೀಸಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಹುದ್ದೆಗಳಿಗೆ ಅಭ್ಯರ್ಥಿಗಳು ಸಿವಿಲ್ ಸರ್ವೀಸಸ್ ಪ್ರಿಲಿಮಿನರಿ ಪರೀಕ್ಷೆಯನ್ನು ಎದುರಿಸಬೇಕಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಯುಪಿಎಸ್‌ಸಿ ಯ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿದ ನಂತರ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 18,2019 ಕೊನೆಯ ದಿನವಾಗಿರುತ್ತದೆ.

| CRITERIA | DETAILS |
| Name Of The Posts | ಇಂಡಿಯನ್ ಅಡ್ಮಿನಿಸ್ಟ್ರೇಟಿವ್ ಸರ್ವೀಸಸ್,ಇಂಡಿಯನ್ ಫಾರೆಸ್ಟ್ ಸರ್ವೀಸಸ್ |
| Organisation | ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ |
| Educational Qualification | ಪದವಿ ವಿದ್ಯಾರ್ಹತೆ |
| Job Location | ಭಾರತದೆಲ್ಲೆಡೆ |
| Application Start Date | February 19, 2019 |
| Application End Date | March 18, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಖಾಲಿ ಹುದ್ದೆಗಳ ವಿವರ:
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಇಂಡಿಯನ್ ಅಡ್ಮಿನಿಸ್ಟ್ರೇಟಿವ್ ಸರ್ವೀಸಸ್ (ಐಎಎಸ್) | 896 |
| ಇಂಡಿಯನ್ ಫಾರೆಸ್ಟ್ ಸರ್ವೀಸಸ್ (ಐಎಫ್‌ಎಸ್) | 90 |
| ಒಟ್ಟು | 986 |
ಈ 6 ಟಿಪ್ಸ್ ನಿಂದ ಯುಪಿಎಸ್ ಸಿ ಪರೀಕ್ಷೆಯನ್ನ ಮೊದಲ ಪ್ರಯತ್ನದಲ್ಲೇ ಪಾಸು ಮಾಡಬಹುದು
ವಯೋಮಿತಿ:
ಅಭ್ಯರ್ಥಿಗಳು ಆಗಸ್ಟ್ 1,2019 ರ ಅನ್ವಯ ಕನಿಷ್ಟ 21 ಮತ್ತು ಗರಿಷ್ಟ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಅಥವಾ ಪರ್ಸನಾಲಿಟಿ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಪ್ರವರ್ಗ-1 /ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ ಮಾರ್ಚ್ 17,2019.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಯುಪಿಎಸ್‌ಸಿ ಯ ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.
ಐಎಎಸ್ ಹುದ್ದೆಗಳ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಐಎಫ್ ಎಸ್ ಹುದ್ದೆಗಳ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











