ಕೇಂದ್ರ ಲೋಕ ಸೇವಾ ಆಯೋಗ 16 ವೈದ್ಯಕೀಯ ಅಧಿಕಾರಿ ಮತ್ತು ವಿಜ್ಞಾನಿ-ಬಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಅಕ್ಟೋಬರ್ 17,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.
ವಿದ್ಯಾರ್ಹತೆ ಏನಿರಬೇಕು ? :
ಭೌತಶಾಸ್ತ್ರ/ ಗಣಿತ/ ಫಾರೆನ್ಸಿಕ್ ಸೈನ್ಸ್ ಅಪ್ಲೈಡ್ ಸೈನ್ಸ್ ಜೊತೆಗೆ ಭೌತಶಾಸ್ತ್ರ / ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ, ರಸಾಯನಶಾಸ್ತ್ರ ಅಥವಾ ಜೈವಿಕ ರಸಾಯನಶಾಸ್ತ್ರವಿಷಯದಲ್ಲಿ ಸ್ನಾತಕೋತ್ತರ ಪದವಿ,ಫಾರ್ಮಸಿ ಅಥವಾ ಫಾರ್ಮಾಸ್ಯುಟಿಕಲ್ ಸೈನ್ಸ್ ಅಥವಾ ಮೆಡಿಸಿನ್ ಜೊತಗೆ ಕ್ಲಿನಿಕಲ್ ಫಾರ್ಮಾಕಾಲಜಿ ಅಥವಾ ಮೈಕ್ರೋ-ಬಯಾಲಜಿ ವಿಷಯದಲ್ಲಿ ಪದವಿ, ಆಯುರ್ವೇದದಲ್ಲಿ ಪದವಿ ಮತ್ತು ಯುನಾನಿ ಯಲ್ಲಿ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ಎಷ್ಟಿರಬೇಕು ? :
ವೈದ್ಯಕೀಯ ಅಧಿಕಾರಿ ಮತ್ತು ವಿಜ್ಞಾನಿ-ಬಿ ಹುದ್ದೆಗಳಿಗೆ ಅನುಸಾರ ಗರಿಷ್ಟ 30 ಮತ್ತು 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
ಆಯ್ಕೆ ಪ್ರಕ್ರಿಯೆ :
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಸಂದರ್ಶನವನ್ನು ನಡೆಸಲಾಗುವುದು. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಸೆಪ್ಟೆಂಬರ್ 28,2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 17,2019ರ ರಾತ್ರಿ 23:59ರೊಳಗೆ
ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 15,2019
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ :
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸುವ ಮೂಲಕ ಅಕ್ಟೋಬರ್ 17,2019ರ ರಾತ್ರಿ 23:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











