UPSC Recruitment 2019: 48 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ಲೋಕ ಸೇವಾ ಆಯೋಗ 48 ಅಸಿಸ್ಟೆಂಟ್ ರಿಜಿಸ್ಟ್ರಾರ್,ಸೀನಿಯರ್ ಎಕ್ಸಾಮಿನರ್,ಅಸಿಸ್ಟೆಂಟ್ ಡೈರೆಕ್ಟರ್, ಡೈರೆಕ್ಟರ್, ಸೀನಿಯರ್ ಡಿಸೈನ್ ಆಫೀಸರ್, ಸೀನಿಯರ್ ಟೆಕ್ನಿಕಲ್ ಅಧಿಕಾರಿ ಮತ್ತು ಪ್ರಿನ್ಸಿಪಾಲ್ ಡಿಸೈನ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 12,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ವಿವಿಧ 48 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಅಸಿಸ್ಟೆಂಟ್ ರಿಜಿಸ್ಟ್ರಾರ್,ಸೀನಿಯರ್ ಎಕ್ಸಾಮಿನರ್,ಅಸಿಸ್ಟೆಂಟ್ ಡೈರೆಕ್ಟರ್,ಡೈರೆಕ್ಟರ್,ಸೀನಿಯರ್ ಡಿಸೈನ್ ಆಫೀಸರ್,ಸೀನಿಯರ್ ಟೆಕ್ನಿಕಲ್ ಅಧಿಕಾರಿ,ಪ್ರಿನ್ಸಿಪಾಲ್ ಡಿಸೈನ್ ಅಧಿಕಾರಿ
Organisation ಕೇಂದ್ರೀಯ ಲೋಕ ಸೇವಾ ಆಯೋಗ
Educational Qualification ಪದವಿ,ಕಾನೂನು ಪದವಿ,ಸಿಎ/ಐಸಿಡಬ್ಲ್ಯೂಎ/ಪಿಜಿ ಡಿಪ್ಲೋಮಾ,
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date November 23, 2019
Application End Date December 12, 2019

ವಿದ್ಯಾರ್ಹತೆ:

ಪದವಿ, ಕಾನೂನು ಪದವಿ ಮತ್ತು ಸಿಎ/ಐಸಿಡಬ್ಲ್ಯೂಎ/ಪಿಜಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 30,35,40,45 ಮತ್ತು 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತವನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಕೇಂದ್ರೀಯ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 12,2019ರ ರಾತ್ರಿ 23:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
UPSC recruitment 2019 notification has been released on official website for the recruitment of 48 various posts. Interested candidates can apply through online before 12th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X