ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ನೇಮಕಾತಿ 965 ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸುತ್ತಿದ್ದು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಗತ್ಯ ದಾಖಲೆಗಳೊಂದಿಗೆ ಮೇ 6,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
CRITERIA | DETAILS |
Name Of The Posts | ಕಂಬೈನ್ಡ್ ಮೆಡಿಕಲ್ ಸರ್ವೀಸಸ್ |
Organisation | ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) |
Educational Qualification | ಎಂಬಿಬಿಎಸ್ |
Job Location | ಭಾರತದೆಲ್ಲೆಡೆ |
Salary Scale | ತಿಂಗಳಿಗೆ 56,100/- ರೂ |
Application Start Date | April 10, 2019 |
Application End Date | May 6, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಹುದ್ದೆಗಳಿಗೆ ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಆಗಸ್ಟ್ 1,2019 ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ /ಪರ್ಸನಾಲಿಟಿ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ /ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ನ ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಹೋಗಿ ಮೇ 6,2019ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಯ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ