ಕೇಂದ್ರ ಲೋಕ ಸೇವಾ ಆಯೋಗ 35 ಸಾರ್ವಜನಿಕ ಆರೋಗ್ಯ ತಜ್ಞ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 3,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಖಾಲಿ ಹುದ್ದೆಗಳ ವಿವರ:
ಸಾರ್ವಜನಿಕ ಅರೋಗ್ಯ ತಜ್ಞ - 17 ಹುದ್ದೆಗಳು
ಸಹಾಯಕ ಪ್ರಾಧ್ಯಾಪಕ - 1 ಹುದ್ದೆ
ವೈದ್ಯಕೀಯ ಅಧಿಕಾರಿ - 2 ಹುದ್ದೆಗಳು
ಸ್ಟಾಫ್ ನರ್ಸ್ - 2 ಹುದ್ದೆಗಳು
ಅಸಿಸ್ಟೆಂಟ್ ಡೈರೆಕ್ಟರ್ - 13 ಹುದ್ದೆಗಳು
ಒಟ್ಟು 35 ಹುದ್ದೆಗಳು
ವಿದ್ಯಾರ್ಹತೆ ಏನಿರಬೇಕು ?:
ಎಂಬಿಬಿಎಸ್/ಪೋಸ್ಟ್ ಗ್ರಾಜುಯೇಟ್, ಎಂ.ಎಸ್ಸಿ ನರ್ಸಿಂಗ್, 12ನೇ ತರಗತಿ/ಜಿಎನ್ಎಂ, ಬಿ.ಎಸ್ಸಿ ನರ್ಸಿಂಗ್ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಎಷ್ಟಿರಬೇಕು ?:
ಯುಪಿಎಸ್ಸಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಕನಿಷ್ಟ 30 ವರ್ಷ ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.
ಆಯ್ಕೆ ಪ್ರಕ್ರಿಯೆ:
ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು, ನಂತರ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ನವೆಂಬರ್ 16,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 3,2020ರ ರಾತ್ರಿ 11:59ರೊಳಗೆ
ಅರ್ಜಿ ಪ್ರಿಂಟೌಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ: ಡಿಸೆಂಬರ್ 4,2020ರ ರಾತ್ರಿ 11:59ರೊಳಗೆ
ಅರ್ಜಿ ಶುಲ್ಕ:
ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಡಿಸೆಂಬರ್ 3,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











