UPSC: 41 ಹುದ್ದೆಗಳಿಗೆ ಅರ್ಜಿ ಅಹ್ವಾನ….ಮಾ.12ರೊಳಗೆ ಅರ್ಜಿ ಹಾಕಿ

ಕೇಂದ್ರ ಲೋಕ ಸೇವಾ ಆಯೋಗ 41 ಜ್ಯೂನಿಯರ್ ಸೈಂಟಿಫಿಕ್ ಅಧಿಕಾರಿ, ಸೈಂಟಿಫಿಕ್ -ಬಿ ಮತ್ತು ರೀಜನಲ್ ಹೋಂ ಎಕನಾಮಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಯುಪಿಎಸ್ಸಿಯಲ್ಲಿ 41 ಹುದ್ದೆಗಳ ನೇಮಕಾತಿ

 

CRITERIA DETAILS
Name Of The Posts ಜ್ಯೂನಿಯರ್ ಸೈಂಟಿಫಿಕ್ ಅಧಿಕಾರಿ, ಸೈಂಟಿಫಿಕ್ -ಬಿ, ರೀಜನಲ್ ಹೋಂ ಎಕನಾಮಿಸ್ಟ್
Organisation ಕೇಂದ್ರೀಯ ಲೋಕ ಸೇವಾ ಆಯೋಗ (ಯುಪಿಎಸ್ಸಿ)
Educational Qualification ಎಂ.ಎಸ್ಸಿ, ಸ್ನಾತಕೋತ್ತರ ಪದವಿ, ಪದವಿ,
Job Location ಭಾರತದೆಲ್ಲೆಡೆ
Application Start Date February 21, 2020
Application End Date March 12, 2020

ವಿದ್ಯಾರ್ಹತೆ:

ಎಂ.ಎಸ್ಸಿ, ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 30, 35 ಮತ್ತು 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, 25/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಶಾಖೆಯಲ್ಲಿ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೇಂದ್ರೀಯ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 12,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

 

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
UPSC recruitment 2020 notification has been released on official website for the recruitment of 41 scientist b, junior scientific officer and regional home economist posts. Interested candidates can apply through online before 12th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X