UPSC: 413 ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ 413 ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಯುಪಿಎಸ್ಸಿ ನೇಮಕಾತಿ: 413 ಹುದ್ದೆಗಳಿಗೆ ಜುಲೈ 6ರೊಳಗೆ ಅರ್ಜಿ ಹಾಕಿ

ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆ ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಜುಲೈ 6,2020ರ ಸಂಜೆ 6ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಖಾಲಿ ಹುದ್ದೆಗಳ ವಿವರ:

ಖಾಲಿ ಹುದ್ದೆಗಳ ವಿವರ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಎನ್‌ಡಿಎ ಮತ್ತು ಎನ್‌ಎ ಖಾಲಿ ಹುದ್ದೆಗಳ ವಿವರ ಇಂತಿವೆ:
ರಾಷ್ಟ್ರೀಯ ರಕ್ಷಣಾ ಅಕಾಡೆಮಿ 370 ಹುದ್ದೆಗಳು
ನೌಕಾ ಅಕಾಡೆಮಿ 43 ಹುದ್ದೆಗಳು
ಒಟ್ಟು 413 ಹುದ್ದೆಗಳು

ವಿದ್ಯಾರ್ಹತೆ ಏನಿರಬೇಕು ?:

ವಿದ್ಯಾರ್ಹತೆ ಏನಿರಬೇಕು ?:

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹುದ್ದೆಗಳಿಗೆ ದ್ವಿತೀಯ ಪಿಯುಸಿ / 10+2 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೌಕಾ ಅಕಾಡೆಮಿ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ /10+2 ನಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್‌ನಲ್ಲಿ ಅಧ್ಯಯನ ಮಾಡಿರಬೇಕು.

ವಯೋಮಿತಿ ಮತ್ತು ಎಷ್ಟಿರಬೇಕು ?:

ವಯೋಮಿತಿ ಮತ್ತು ಎಷ್ಟಿರಬೇಕು ?:

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಿವಾಹಿತ ಪುರುಷ ಅಭ್ಯರ್ಥಿಯು ಜನವರಿ 2,2002ರ ಮುಂಚೆ ಮತ್ತು ಜುಲೈ 1,2005ರ ನಂತರ ಜನಿಸಿರಬಾರದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜುಲೈ 6,2020ರೊಳಗೆ ಅಥವಾ ಯಾವುದಾದರು ಬ್ಯಾಂಕ್ ಶಾಖೆಯ ಮೂಲಕ ಜುಲೈ 5,2020ರೊಳಗೆ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ :

ಅರ್ಜಿ ಸಲ್ಲಿಕೆ :

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜುಲೈ 6,2020ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2020 notification has been released on official website for the recruitment of 413 NDA and NA (II) Posts. Interested candidates can apply through online before July 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+