UPSC Recruitment 2020: 44 ಫೋರ್ ಮೆನ್, ಸಹಾಯಕ ಮತ್ತು ಪ್ಯಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ 44 ಫೋರ್ ಮೆನ್, ಸೀನಿಯರ್ ಸೈಂಟಿಫಿಕ್ ಅಸಿಸ್ಟೆಂಟ್ ಮತ್ತು ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಯುಪಿಎಸ್ಸಿ ನೇಮಕಾತಿ: 44 ಹುದ್ದೆಗಳ ನೇಮಕಾತಿ..ಅ.29ರೊಳಗೆ ಅರ್ಜಿ ಹಾಕಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 29,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ ಏನಿರಬೇಕು ?:

ವಿದ್ಯಾರ್ಹತೆ ಏನಿರಬೇಕು ?:

ಪದವಿ, ಎಎಂಐಇ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್, ಇಂಜಿನಿಯರಿಂಗ್ ಪದವಿ, ಎಎಂಐಇ, ಎಂ.ಎಸ್ಸಿ, ಎಂಬಿಬಿಎಸ್, ಪೋಸ್ಟ್ ಗ್ರಾಜುಯೇಟ್, ಡಿ.ಎಂ, ಎಂ,ಸಿಹೆಚ್, ಡಿಎಂಆರ್ಡಿ ಮತ್ತು ಮಾಸ್ಟರ್ ಆಫ್ ಸರ್ಜರಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಎಷ್ಟಿರಬೇಕು ?:

ವಯೋಮಿತಿ ಎಷ್ಟಿರಬೇಕು ?:

ಯುಪಿಎಸ್ಸಿ ನೇಮಕಾತಿಯ ಫೋರ್ ಮೆನ್, ಸೀನಿಯರ್ ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ಮತ್ತು ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಫೋರ್ ಮೆನ್, ಸೀನಿಯರ್ ಸೈಂಟಿಫಿಕ್ ಅಸಿಸ್ಟೆಂಟ್ ಮತ್ತು ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು:

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಅಕ್ಟೋಬರ್ 10,2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 29,2020ರ ರಾತ್ರಿ 11:59 ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಅಕ್ಟೋಬರ್ 29,2020

ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ: ಅಕ್ಟೋಬರ್ 30,2020

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 29,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2020 notification has been released for 44 foreman, assistant and professor posts. Interested candidates can apply through online before Oct 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+