UPSC Recruitment 20221: 159 ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ 159 ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸಸ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅಧಿಸೂಚನೆ ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಮೇ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ ಏನಿರಬೇಕು ?:

ವಿದ್ಯಾರ್ಹತೆ ಏನಿರಬೇಕು ?:

ಕೇಂದ್ರ ಲೋಕ ಸೇವಾ ಆಯೋಗವು ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸಸ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:

ಹುದ್ದೆಗಳ ವಿವರ:

ಬಾರ್ಡರ್ ಸೆಕ್ಯುರಿಟಿ ಫೋರ್ಸ್ - 35 ಹುದ್ದೆಗಳು
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ - 36 ಹುದ್ದೆಗಳು
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ - 67 ಹುದ್ದೆಗಳು
ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ - 20 ಹುದ್ದೆಗಳು
ಸಶಸ್ತ್ರ ಸೀಮಾ ಬಲ್ - 1 ಹುದ್ದೆ
ಒಟ್ಟು 159 ಹುದ್ದೆಗಳು

ವಯೋಮಿತಿ ಎಷ್ಟಿರಬೇಕು ?:

ವಯೋಮಿತಿ ಎಷ್ಟಿರಬೇಕು ?:

ಈ ಹುದ್ದೆಗಳಿಗೆ ಆಗಸ್ಟ್ 1,2021ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ 3 ವರ್ಷ, ಪ.ಜಾ/ಪ.ಪಂ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 5,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಏಪ್ರಿಲ್ 15,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 5,2021

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2021 notification has been released for 159 central armed police forces. Interested candidates can apply through online before may 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+