ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ 21 ಸಹಪ್ರಾಧ್ಯಾಪಕ ಮತ್ತು ಟ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ದೆಹಲಿಯಲ್ಲಿ ಅಥವಾ ಭಾರತದಲ್ಲಿ ಎಲ್ಲಿಯಾದರೂ ಪೂರ್ಣ ಸಮಯದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅರ್ಜಿ ಪ್ರಕ್ರಿಯೆಯು ನವೆಂಬರ್ 29,2021 ರಿಂದ ಡಿಸೆಂಬರ್ 16,2021ರ ರಾತ್ರಿ 11:59ರ ವರೆಗೆ ನಡೆಯಲಿದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಯುಪಿಎಸ್‌ಸಿ ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :
ಯುಪಿಎಸ್ಸಿ ನೇಮಕಾತಿಯ ಸಹಪ್ರಾಧ್ಯಾಪಕ ಮತ್ತು ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, ಪಿಹೆಚ್.ಡಿ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಯುಪಿಎಸ್‌ಸಿ ನೇಮಕಾತಿ 2021 ವಯೋಮಿತಿ :
ಯುಪಿಎಸ್‌ಸಿ ನೇಮಕಾತಿಯ ಸಹಪ್ರಾಧ್ಯಾಪಕ ಮತ್ತು ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಟ 50 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಯುಪಿಎಸ್‌ಸಿ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಯುಪಿಎಸ್‌ಸಿ ನೇಮಕಾತಿಯ ಸಹಪ್ರಾಧ್ಯಾಪಕ ಮತ್ತು ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ಪರೀಕ್ಷೆ (ಆರ್‌ಟಿ)/ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಯುಪಿಎಸ್‌ಸಿ ನೇಮಕಾತಿ 2021 ವೇತನ :
ಯುಪಿಎಸ್‌ಸಿ ನೇಮಕಾತಿಯ ಸಹಪ್ರಾಧ್ಯಾಪಕ ಮತ್ತು ಟ್ಯೂಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಯುಪಿಎಸ್‌ಸಿ ನೇಮಕಾತಿ 2021 ಅರ್ಜಿ ಶುಲ್ಕ :
ಯುಪಿಎಸ್‌ಸಿ ನೇಮಕಾತಿಯ ಸಹಪ್ರಾಧ್ಯಾಪಕ ಮತ್ತು ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಮೊತ್ತ 25/-ರೂ (ಜನ್/ಒಬಿಸಿ/ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳು) ಅನ್ನು ಎಸ್‌ಬಿಐನ ಯಾವುದೇ ಶಾಖೆಯಲ್ಲಿ ನಗದು ಅಥವಾ ಎಸ್‌ಬಿಐನ ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಬಳಸಿ ಪಾವತಿಸಬಹುದು. ಅದಲ್ಲದೇ ಯುಪಿಎಸ್ಸಿ ಉಪ ನಿರ್ದೇಶಕರ ನೇಮಕಾತಿ ಅಧಿಸೂಚನೆ 2021 ರಲ್ಲಿ ಹೇಳಿರುವಂತೆ SC/ST/PwBD/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಯುಪಿಎಸ್‌ಸಿ ನೇಮಕಾತಿ 2021 ಅರ್ಜಿ ಸಲ್ಲಿಕೆ :
ಯುಪಿಎಸ್‌ಸಿ ನೇಮಕಾತಿಯ ಸಹಪ್ರಾಧ್ಯಾಪಕ ಮತ್ತು ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.upsconline.nic.in/ora/VacancyNoticePub.php ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 29,2021 ರಿಂದ ಡಿಸೆಂಬರ್ 16,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.