UPSC Recruitment 2021: 241 ಇಎಸ್‌ಇ, ಐಇಎಸ್/ ಐಎಸ್‌ಎಸ್‌ ಪರೀಕ್ಷೆಗೆ ಅರ್ಜಿ ಆಹ್ವಾನ

ಯುಪಿಎಸ್ಸಿ ಯಲ್ಲಿ 241 ಹುದ್ದೆಗಳ ನೇಮಕಾತಿ

ಕೇಂದ್ರ ಲೋಕ ಸೇವಾ ಆಯೋಗ 241 ಇಂಜಿನಿಯರಿಂಗ್ ಸರ್ವೀಸ್ ಎಕ್ಸಾಮಿನೇಶನ್ (ಇಎಸ್ಇ), ಇಂಡಿಯನ್ ಎಕನಾಮಿಕ್ ಸರ್ವೀಸ್ (ಐಇಎಸ್) ಮತ್ತು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವೀಸಸ್ (ಐಎಸ್‌ಎಸ್‌) ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅಧಿಸೂಚನೆ ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಏಪ್ರಿಲ್ 27,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಖಾಲಿ ಹುದ್ದೆಗಳ ವಿವರ:

ಖಾಲಿ ಹುದ್ದೆಗಳ ವಿವರ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಇಎಸ್ಐ, ಐಇಎಸ್ ಮತ್ತು ಐಎಸ್ಎಸ್ ಖಾಲಿ ಹುದ್ದೆಗಳ ವಿವರ ಇಂತಿವೆ.
ಇಎಸ್‌ಇ - 215 ಹುದ್ದೆಗಳು
ಐಇಎಸ್ - 15 ಹುದ್ದೆಗಳು
ಐಎಸ್ಎಸ್ - 11 ಹುದ್ದೆಗಳು
ಒಟ್ಟು 241 ಹುದ್ದೆಗಳು

ವಿದ್ಯಾರ್ಹತೆ ಏನಿರಬೇಕು ?:

ವಿದ್ಯಾರ್ಹತೆ ಏನಿರಬೇಕು ?:

ಕೇಂದ್ರ ಲೋಕ ಸೇವಾ ಆಯೋಗ ಇಎಸ್ಇ, ಐಇಎಸ್ ಮತ್ತು ಐಎಸ್‌ಎಸ್‌ ಹುದ್ದೆಗಳಿಗೆ ಡಿಪ್ಲೋಮಾ, ಬಿ.ಇ/ಬಿ.ಟೆಕ್, ಎಂ.ಎಸ್ಸಿ, ಪೋಸ್ಟ್ ಗ್ರಾಜುಯೇಟ್, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಎಷ್ಟಿರಬೇಕು ?:

ವಯೋಮಿತಿ ಎಷ್ಟಿರಬೇಕು ?:

ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಏಪ್ರಿಲ್ 27,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಏಪ್ರಿಲ್ 7,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 27,2021

ಅಭ್ಯರ್ಥಿಗಳು ಐಇಎಸ್/ಐಎಸ್‌ಎಸ್‌ ಪರೀಕ್ಷೆಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಇಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2021 notification has been released for 241 engineering services examination, IES/ISS posts. Interested candidates can apply through online before April 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+