UPSC Recruitment 2021: 400 ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ (II) ಹುದ್ದೆಗಳಿಗೆ ಅರ್ಜಿ ಆಹ್ವಾನ

ಯುಪಿಎಸ್‌ಸಿ ಎನ್‌ಡಿಎ ಮತ್ತು ಎನ್‌ಎ (II) ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ

ಕೇಂದ್ರ ಲೋಕ ಸೇವಾ ಆಯೋಗವು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ (II) ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಯುಪಿಎಸ್ಸಿ ಒಟ್ಟು 400 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅಧಿಸೂಚನೆ ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಜೂನ್ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಖಾಲಿ ಹುದ್ದೆಗಳ ವಿವರ:

ಖಾಲಿ ಹುದ್ದೆಗಳ ವಿವರ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಎನ್‌ಡಿಎ ಮತ್ತು ಎನ್‌ಎ (II) ಖಾಲಿ ಹುದ್ದೆಗಳ ವಿವರ ಇಂತಿವೆ.

ರಾಷ್ಟ್ರೀಯ ರಕ್ಷಣಾ ಅಕಾಡೆಮಿ 370 ಹುದ್ದೆಗಳು
ನೌಕಾ ಅಕಾಡೆಮಿ 30 ಹುದ್ದೆಗಳು
ಒಟ್ಟು 400 ಹುದ್ದೆಗಳು

ವಿದ್ಯಾರ್ಹತೆ ಏನಿರಬೇಕು ?:

ವಿದ್ಯಾರ್ಹತೆ ಏನಿರಬೇಕು ?:

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹುದ್ದೆಗಳಿಗೆ ದ್ವಿತೀಯ ಪಿಯುಸಿ / 10+2 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ನೌಕಾ ಅಕಾಡೆಮಿ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ /10+2 ನಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್‌ನಲ್ಲಿ ಅಧ್ಯಯನ ಮಾಡಿರಬೇಕು.

ವಯೋಮಿತಿ ಎಷ್ಟಿರಬೇಕು ?:

ವಯೋಮಿತಿ ಎಷ್ಟಿರಬೇಕು ?:

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಿವಾಹಿತ ಪುರುಷ ಅಭ್ಯರ್ಥಿಯು ಜನವರಿ 2,2003ರ ಮುಂಚೆ ಮತ್ತು ಜನವರಿ 1,2006ರ ನಂತರ ಜನಿಸಿರಬಾರದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 100/-ರೂ ಅರ್ಜಿ ಶುಲ್ಕವನ್ನು ಆಫ್‌ಲೈನ್ ಮೂಲಕ ಜೂನ್ 28ರೊಳಗೆ ಮತ್ತು ಆನ್‌ಲೈನ್ ಮೂಲಕ ಜೂನ್ 29,2021ರ ಸಂಜೆ 6 ಗಂಟೆಯೊಳಗೆ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜೂನ್ 29,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್ 9,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 29,2021ರ ಸಂಜೆ 6 ಗಂಟೆಗೆ
ಆನ್‌ಲೈನ್ ಅರ್ಜಿ ಪಡೆದುಕೊಳ್ಳು: ಜುಲೈ 6 ರಿಂದ ಜುಲೈ 12,2021

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
UPSC recruitment 2021 notification has been released on official website for 400 NDA and NA (II) posts. Interested candidates can apply through online before June 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X