UPSC Recruitment 2021 : 838 ಜ್ಯೂನಿಯರ್ ಸ್ಕೇಲ್ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ

ಯುಪಿಎಸ್ಸಿ 838 ಹುದ್ದೆಗಳ ನೇಮಕಾತಿ ಅಧಿಸೂಚನೆ ರಿಲೀಸ್

ಕೇಂದ್ರ ಲೋಕ ಸೇವಾ ಆಯೋಗ 838 ಜ್ಯೂನಿಯರ್ ಸ್ಕೇಲ್, ಅಸಿಸ್ಟೆಂಟ್ ಡಿವಿಷನಲ್ ವೈದ್ಯಕೀಯ ಅಧಿಕಾರಿ ಮತ್ತು ಜನರಲ್ ಡ್ಯೂಟಿ ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅಧಿಸೂಚನೆ ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಜುಲೈ 27,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ ಏನಿರಬೇಕು ?:

ವಿದ್ಯಾರ್ಹತೆ ಏನಿರಬೇಕು ?:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಜ್ಯೂನಿಯರ್ ಸ್ಕೇಲ್ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಎಷ್ಟಿರಬೇಕು ?:

ವಯೋಮಿತಿ ಎಷ್ಟಿರಬೇಕು ?:

ಆಗಸ್ಟ್ 1,2021ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಗಳ ಸಡಿಲಿಕೆಯನ್ನು ನೀಡಲಾಗಿರುತ್ತೆ.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜುಲೈ 27,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜುಲೈ 7,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 27,2021
ಆನ್‌ಲೈನ್ ಅರ್ಜಿಯನ್ನು ವಿತ್‌ಡ್ರಾ ಮಾಡುವ ದಿನಾಂಕ : ಆಗಸ್ಟ್ 3 ರಿಂದ 9,2021
ಕಂಬೈನ್ಡ್ ಸರ್ವಿಸ್ ಪರೀಕ್ಷೆ : ನವೆಂಬರ್ 21,2021
ಲಿಖಿತ ಪರೀಕ್ಷೆ ದಿನಾಂಕ : ನವೆಂಬರ್/ಡಿಸೆಂಬರ್ 2021

ಅಭ್ಯರ್ಥಿಗಳು ಯುಪಿಎಸ್ಸಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2021 notification has been released for 838 junior scale, assistant division medical officer posts. Interested candidates can apply before july 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+