ಕೇಂದ್ರ ಲೋಕ ಸೇವಾ ಆಯೋಗ 89 ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್, ಎಕನಾಮಿಕ್ ಆಫೀಸರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 18,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಮಾಹಿತಿ ಪಡೆಯಲು ಮುಂದೆ ಓದಿ.

ಹುದ್ದೆಗಳ ವಿವರ:
ಎಕನಾಮಿಕ್ ಆಫೀಸರ್ - 1 ಹುದ್ದೆ
ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ - 10 ಹುದ್ದೆಗಳು
ಪ್ರೋಗ್ರಾಮರ್ ಗ್ರೇಡ್.ಎ - 1 ಹುದ್ದೆ
ಪಬ್ಲಿಕ್ ಪ್ರಾಸಿಕ್ಯುಟರ್ - 43 ಹುದ್ದೆಗಳು
ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯುಟರ್ -26 ಹುದ್ದೆಗಳು
ಸೀನಿಯರ್ ಸೈಂಟಿಫಿಕ್ ಆಫೀಸರ್ -8 ಹುದ್ದೆಗಳು
ಒಟ್ಟು 89 ಹುದ್ದೆಗಳು
ವಿದ್ಯಾರ್ಹತೆ:
ಪೋಸ್ಟ್ ಗ್ರಾಜುಯೇಶನ್, ಬಿ.ಇ/ಬಿ.ಟೆಕ್, ಸ್ನಾತಕೋತ್ತರ ಪದವಿ ಮತ್ತು ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 30 ರಿಂದ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ, ಪ.ಪಂ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 18,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.