ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ 17 ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ

ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ಯ ನ್ಯಾಯಾಲಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 17 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ..ಮಾ.18 ರೊಳಗೆ ಅರ್ಜಿ ಹಾಕಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 18,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ಸಂಬಳ ಮತ್ತು ಇನ್ನಿತರೆ ಮಾಹಿತಿಗಳನ್ನು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ಶೀಘ್ರಲಿಪಿಗಾರ
Organisation ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Educational Qualification ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಉತ್ತರ ಕನ್ನಡ ಜಿಲ್ಲೆ (ಕರ್ನಾಟಕ)
Salary Scale ತಿಂಗಳಿಗೆ 27,650/- ರಿಂದ 52,650/-ರೂ
Application Start Date February 17, 2020
Application End Date March 18, 2020

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.

ವಯೋಮಿತಿ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಕನಿಷ್ಠ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ್ರವರ್ಗ-2ಎ,2ಬಿ, 3ಎ,3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ವೇತನದ ವಿವರ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಉಕ್ತಲೇಖನವನ್ನು ಕೊಟ್ಟು ಕಂಪ್ಯೂಟರ್‌ನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.

ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:

ಸಾಮಾನ್ಯ ವರ್ಗ,ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ200/-ರೂ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100/-ರೂ

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/uttarakannada-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಮಾರ್ಚ್ 19,2020ರೊಳಗೆ ಶುಲ್ಕವನ್ನು ಪಾವತಿಸತಕ್ಕದ್ದು.

ಆನ್‌ಲೈನ್ ಮುಖಾಂತರ ಪಾವತಿಸುವುದನ್ನು ಹೊರತುಪಡಿಸಿ ಯಾವುದೇ ಆನ್‌ಲೈನ್ ಚಲನ್, ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ https://districts.ecourts.gov.in/uttarakannada-onlinerecruitment ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮಾರ್ಚ್ 18,2020ರ ರಾತ್ರಿ 11:59 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
District court of uttara kannada recruitment 2020 notification has been released on official website for the recruitment of 17 stenographer posts.Interested candidates can apply through online before 18th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+