Uttara Kannada District Court Recruitment 2022 : 19 ಶೀಘ್ರಲಿಪಿಗಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಉತ್ತರಕನ್ನಡ, ಕಾರವಾರ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 13 ಜವಾನ ಮತ್ತು 6 ಶೀಘ್ರಲಿಪಿಗಾರ ಸೇರಿದಂತೆ ಒಟ್ಟು 19 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 2,2022 ರಿಂದ ಜೂನ್ 1,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಉತ್ತರ ಕನ್ನಡ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ.. ಜೂನ್.1ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ :

ಶೀಘ್ರಲಿಪಿಗಾರ ಹುದ್ದೆಗಳಿಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಜವಾನ ಹುದ್ದೆಗಳಿಗೆ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ :

ಉತ್ತರ ಕನ್ನಡ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನೇಮಕಾತಿಯ ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 28,950/-ರೂ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ ವೇತನವನ್ನು ನೀಡಲಾಗುವುದು.

ವಯೋಮಿತಿ :

ಉತ್ತರ ಕನ್ನಡ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಉತ್ತರ ಕನ್ನಡ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ.. ಜೂನ್.1ರೊಳಗೆ ಅರ್ಜಿ ಹಾಕಿ

ಆಯ್ಕೆಯ ವಿಧಾನ :

ಉತ್ತರ ಕನ್ನಡ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು.

ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ತದನಂತರ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ನಿಗದಿತ ಅರ್ಜಿ ಶುಲ್ಕ :

ಉತ್ತರ ಕನ್ನಡ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ ಮತ್ತು ಜವಾನ ಹುದ್ದೆಗಳಿಗೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 300/-ರೂ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ :

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/uttarakannada-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.
ಈ ರೀತಿ net banking/credit card/ debit card/challan download ಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಜೂನ್ 2,2022ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.

ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

ಉತ್ತರ ಕನ್ನಡ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ.. ಜೂನ್.1ರೊಳಗೆ ಅರ್ಜಿ ಹಾಕಿ

ಅರ್ಜಿ ಸಲ್ಲಿಸುವುದು ಹೇಗೆ :

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಉತ್ತರಕನ್ನಡ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/uttarakannada-onlinerecruitment ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 2,2022 ರಿಂದ ಜೂನ್ 1,2022ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
District court of uttara kannada recruitment 2022 notification has been released for 19 stenographer and peon posts. Interested candidates can apply before june 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X