Uttara Kannada District Revenue Department Recruitment 2022 : 102 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲಾ ಕಂದಾಯ ಘಟಕದಲ್ಲಿ ಬರುವ ತಾಲೂಕು ಕಚೇರಿಗಳಲ್ಲಿ ಹಾಗೂ ಭೂಮಿ ಕೇಂದ್ರಗಳಲ್ಲಿ ಖಾಲಿ ಇರುವ 102 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಉತ್ತರ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 102 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ

ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಏಪ್ರಿಲ್ 11,2022 ರಿಂದ ಮೇ 10,2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಸಿಬಿಎಸ್ಸಿ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು.

ವಯೋಮಿತಿ:

ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 102 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ

ವೇತನದ ವಿವರ:

ಉತ್ತರ ಕನ್ನಡ ಜಿಲ್ಲಾ ಕಂದಾಯ ಘಟಕ ನೇಮಕಾತಿಯ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್.ಇ ಅಥವಾ ಐ.ಸಿ.ಎಸ್.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಉತ್ತರ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 102 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ವರ್ಗ, 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಮೇ 10,2022ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ https://karwar-va.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಏಪ್ರಿಲ್ 11,2022 ರಿಂದ ಮೇ 10,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Uttara kannada district revenue department recruitment 2022 notification has been released for 102 village accountant posts. Interested candidates can apply before may 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+