ಯಾದಗಿರಿ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 23 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ
ಗ್ರಾಮ ಲೆಕ್ಕಿಗ: 23 ಹುದ್ದೆಗಳು
ವೇತನ ಶ್ರೇಣಿ: ರೂ.11600-21000/-
ಶೈಕ್ಷಣಿಕ ವಿದ್ಯಾರ್ಹತೆ
ಕರ್ನಾಟಕ ಪಿಯು ಬೋರ್ಡ್ ನಡೆಸುವ ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್ಇ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ದೂರ ಶಿಕ್ಷಣದ ಮೂಲಕ ಪಿಯುಸಿ ಅಥವಾ ಸಮಾನಂತರ ವಿದ್ಯಾರ್ಹತೆ ಹೊಂದಿರುವವರು ಅರ್ಹರಿರುವುದಿಲ್ಲ. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನ ಕಡ್ಡಾಯವಾಗಿರುತ್ತದೆ.
ವಯೋಮಿತಿ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷಗಳು.
(ಒಬಿಸಿ ವರ್ಗದವರಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇದೆ)
ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿದೆ.
ಅರ್ಜಿ ಶುಲ್ಕ
- ಸಾಮಾನ್ಯ ಅಭ್ಯರ್ಥಿಗಳಿಗೆ ರೂ.400/-
- ಒಬಿಸಿ ಅಭ್ಯರ್ಥಿಗಳಿಗೆ ರೂ.300/-
- ಎಸ್.ಸಿ/ಎಸ್.ಟಿ/ಪ್ರ-1/ ಅಭ್ಯರ್ಥಿಗಳಿಗೆ ರೂ.200/-
ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಪಿಯುಸಿ ಅಥವಾ ಸಿಬಿಎಸ್ಇ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-12-2017
ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ: 26-12-2017
ಹೆಚ್ಚಿನ ಮಾಹಿತಿಗಾಗಿ yadgir-va.kar.nic.in ಗಮನಿಸಿ


Click it and Unblock the Notifications











