Vijayapur District Child Labour Society Recruitment 2021: ನಿರ್ದೇಶಕ, ಗುಮಾಸ್ತ, ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ಬಾಲಕಾರ್ಮಿಕ ಯೋಜನೆ ಅಡಿಯಲ್ಲಿ ಗೌರವ ಧನದ ಆಧಾರದ ಮೇಲೆ ವಿಜಯಪುರ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ 3 ಯೋಜನಾ ನಿರ್ದೇಶಕರು, ಗುಮಾಸ್ತ ಮತ್ತು ಕಛೇರಿ ಜವಾನರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿಜಯಪುರ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಉದ್ಯೋಗಾವಕಾಶ...ಏ.12ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ/ಎಂ.ಎಸ್‌.ಡಬ್ಲ್ಯೂ/ಅಭಿವೃದ್ಧಿ ಅಧ್ಯಯನ/ಲಾಭರಹಿತ ಸಂಸ್ಥೆಗಳ ನಿರ್ವಹಣಾಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಕಂಪ್ಯೂಟರ್ ಜ್ಞಾನ, ಬಿ.ಕಾಂ ಪದವಿ ಮತ್ತು ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಹತೆಯನ್ನ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಯೋಜನಾ ನಿರ್ದೇಶಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,965/-ರೂ, ಗುಮಾಸ್ತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,310/-ರೂ ಮತ್ತು ಕಛೇರಿ ಜವಾನರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,648/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಕಂಪ್ಯೂಟರ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://vijayapura.nic.in/en/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಗೆಜೆಟೆಡ್ ಅಧಿಕಾರಿಗಳಿಂದ ಧೃಡೀಕೃತ ಎಲ್ಲಾ ದಾಖಲಾತಿಗಳೊಂದಿಗೆ ಖುದ್ದಾಗಿ ಅರ್ಜಿಯನ್ನು ಜಿಲ್ಲಾ ಬಾಲಕಾರ್ಮಿಕ ಯೋಜನಾ ಕಛೇರಿ, ಕಾರ್ಮಿಕ ಇಲಾಖೆ ಅಲ್ಲಾಪುರ ಓಣಿ ಸಿಂದಗಿ ನಾಕಾ, ವಿಜಯಪುರ ಕಚೇರಿಗೆ ಏಪ್ರಿಲ್ 12,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Vijayapura district child labour society recruitment 2021 notification has been released for 3 peon, director and clerk posts. Interested candidates can apply before April 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+